ಉಡುಪಿ : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಶ್ವದ ಎಲ್ಲೆಡೆ ಸಾಮೂಹಿಕವಾಗಿ ಯೋಗಾಸನ ಮಾಡುವ ಮೂಲಕ ಆಚರಿಸಲಾಗುತ್ತಿದೆ. ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮುಂಬೈ ಪ್ರವಾಸದಲ್ಲಿದ್ದು, ಮಠದಲ್ಲೇ ಯೋಗಾಭ್ಯಾಸ ಮಾಡಿದರು.ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮುಂಬೈ ಪ್ರವಾಸ ಕೈಗೊಂಡಿದ್ದು, ಹಲವಾರು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಮಠದ ಶಿಷ್ಯರ ಜೊತೆ ಬೆಳಗ್ಗೆ ಯೋಗಾಭ್ಯಾಸವನ್ನು ಮಾಡಿದರು. ಪ್ರತಿದಿನ ಪೇಜಾವರ ಶ್ರೀಗಳು ಯೋಗಾಭ್ಯಾಸವನ್ನು ಮಾಡಿ