ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ.ಪಿ.ಯೋಗೇಶ್ವರ್ ರಾಜೀನಾಮೆ ನೀಡಿದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಶಾಸಕ ಯೋಗೇಶ್ವರ್ ಅವರಿಗೆ ಕಾಂಗ್ರೆಸ್ ಪಕ್ಷ ಉತ್ತಮ ಸ್ಥಾನಮಾನ ನೀಡಿದೆ. ಅವರು ಹೇಳಿದ ವ್ಯಕ್ತಿಗಳಿಗೆ ಜಿಲ್ಲಾ ಪಂಚಾಯಿತಿಯಲ್ಲಿ ಟಿಕೆಟ್ ನೀಡಲಾಗಿದೆ. ಕೇವಲ ರಾಜಕೀಯ ಕಾರಣಗಳಿಗಾಗಿ ಆರೋಪಿಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ಯೋಗೇಶ್ವರ್ ಅವರಿಗೆ ನೀಡಿದ ಗೌರವವನ್ನು ಬೇರೆ ಯಾವ ಪಕ್ಷವು ನೀಡಲು ಸಾಧ್ಯವಿಲ್ಲ.