ಕೊಪ್ಪಳ : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿಯ ಘಟಾನುಘಟಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಸಮರೋಪಾದಿಯಾಗಿ ಭೇಟಿ ನೀಡುತ್ತಿದ್ದಾರೆ. ರಾಜ್ಯಾದ್ಯಂತ ಅಬ್ಬರದ ಪ್ರಚಾರ ನಡೆಸುತ್ತಾ, ಮತದಾರನ್ನ ಸೆಳೆಯಲು ನಾನಾ ತಂತ್ರ ಹೆಣೆಯುತ್ತಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೂ ಭಾನುವಾರ ಕೊಪ್ಪಳ ಜಿಲ್ಲೆಗೆ ಆಗಮಿಸಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿಗೆ ಬರುತ್ತಿದ್ದಂತೆ ಅದ್ಧೂರಿ ರೋಡ್ ಶೋ ನಡೆಸಿದ ಯುಪಿ ಸಿಎಂ,