ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸ್ಫೂರ್ತಿಯಿಂದ ರಾಜ್ಯದಲ್ಲೂ ಮಠದ ಸ್ವಾಮೀಜಿಗಳು ಬಿಜೆಪಿ ಟಿಕೆಟ್ ಕೇಳಿದ್ದಾರೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಬಿಜೆಪಿ ಹೈಕಮಾಂಡ್ಗೆ ಎಂಟು ಮಠದ ಸ್ವಾಮೀಜಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಚಿತ್ರದುರ್ಗ, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ವಿಜಯಪುರ, ಬೀದರ್ ಜಿಲ್ಲೆಗಳಿಂದ ಸ್ವಾಮೀಜಿಗಳು ಟಿಕೆಟ್ಗಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಮೂವರು ಹಿಂದುಳಿದ ವರ್ಗ, ಐವರು