ಬೆಂಗಳೂರು : ನಾಗಮಂಗಲದಲ್ಲಿ ಕೆಎಸ್ಆರ್ಟಿಸಿ ಚಾಲಕ ಆತ್ಮಹತ್ಯೆಗೆ ಯತ್ನಿಸಿದ್ದು ಯಾವ ಕಾರಣಕ್ಕೆ ಎಂಬ ಬಗ್ಗೆ ಮಾಹಿತಿ ಇಲ್ಲ. ವರ್ಗಾವಣೆ ಯಾವ ಕಾರಣಕ್ಕೆ ಎಂಬ ಮಾಹಿತಿ ತರಿಸಿಕೊಳ್ಳುತ್ತೇನೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿಕೆ ನೀಡಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲ ಬಸ್ ಡಿಪೋದ ಚಾಲಕ ಜಗದೀಶ್, ಸಚಿವ ಚಲುವರಾಯಸ್ವಾಮಿ ಸೂಚನೆಯಂತೆ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತೀವ್ರ ಅಸ್ವಸ್ಥರಾಗಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ರಾಮಲಿಂಗಾ ರೆಡ್ಡಿ, ಯಾವ