ಬೆಂಗಳೂರು : ಪ್ರೀತಿ ನಿರಾಕರಿಸಿದ ಯುವತಿಗೆ ಚಾಕುವಿನಿಂದ ಇರಿದು ಕೊಲೆ ಯತ್ನ ನಡೆಸಿದ್ದ ಅಪರಾಧಿಗೆ ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಐದು ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 25 ಸಾವಿರ ರು. ದಂಡ ವಿಧಿಸಿದೆ. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸುಭಾಷ್ ಬಿ. ಸಂಕದ್ ಅವರು ಅಪರಾಧಿ ಅನಿಲ್ ಕುಮಾರ್ ಅಲಿಯಾಸ್ ರಾಹುಲ್ಗೆ ಶಿಕ್ಷೆ ವಿಧಿಸಿ,