ಚಿಕ್ಕಬಳ್ಳಾಪುರ : ಸಿನಿಮೀಯ ಶೈಲಿಯಲ್ಲಿ ಬೈಕ್ ವೀಲ್ಹಿಂಗ್ ಮಾಡುತ್ತಿದ್ದಾಗ ನಿಯಂತ್ರಣ ಕಳೆದುಕೊಂಡ ಪರಿಣಾಮ ಅಪಘಾತಕ್ಕೀಡಾಗಿ ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವುಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ. ಇದೀಗ ಆತ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾನೆ. ಅಪ್ರೋಜ್ ಪಾಷಾ (16) ಮೃತ ವಿದ್ಯಾರ್ಥಿ. ಮೈಲಾಂಡಹಳ್ಳಿ ಗ್ರಾಮದ 18 ವರ್ಷದ ತಾಜ್ ಉಲ್ಲಾ ಷರೀಪ್ ಹಾಗೂ ಅಪ್ರೋಜ್ ಪಾಷಾ ಇತ್ತೀಚೆಗೆ ಕುರುಟಹಳ್ಳಿ ಗ್ರಾಮದ ರಸ್ತೆಯಲ್ಲಿ ಬೈಕ್ ವೀಲ್ಹಿಂಗ್ ಮಾಡಿದ್ದರು. ಬೈಕ್ ಚಾಲನೆ ಮಾಡುತ್ತಿದ್ದ