ಆಕೆ ಮದುವೆಗೂ ಮೊದಲೇ ಮಗುವಿಗೆ ಜನ್ಮ ನೀಡಿದ್ದಳು. ಆದರೆ ಇದನ್ನೇ ದುರುಪಯೋಗಪಡಿಸಿಕೊಂಡ ವೈದ್ಯರೊಬ್ಬರು ಮಾಡಬಾರದ ಕೆಲಸ ಮಾಡಿದ್ದಾರೆ. ಯುವತಿಯೊಬ್ಬಳು ಮದುವೆಗೂ ಮೊದಲೇ ಹೆಣ್ಣು ಮಗುವಿಗೆ ಜನ್ಮನೀಡಿದ್ದಳು. ಈ ವಿಷಯ ತಿಳಿದ ಸರಕಾರಿ ಆಸ್ಪತ್ರೆ ವೈದ್ಯರೇ ಹೆಣ್ಣು ಮಗುವನ್ನು ಬೇರೊಬ್ಬರಿಗೆ ಮಾರಾಟ ಮಾಡಿದ್ದಾರೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಏಳೆಂಟು ತಿಂಗಳ ಬಳಿಕ ಪ್ರಕರಣ ಬಯಲಿಗೆ ಬಂದಿದೆ. ಹೆಣ್ಣು ಮಗುವನ್ನು 50 ಸಾವಿರಕ್ಕೂ ಹೆಚ್ಚು ರೂಪಾಯಿಗೆ