ಪ್ರೀತಿಸುವಂತೆ ಹಿಂದೆ ಬಿದ್ದು ಕಿರುಕುಳ ನೀಡುತ್ತಿದ್ದ ಯುವಕನಿಂದ ಬೇಸತ್ತ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಣಗರಹುಂಡಿ ಗ್ರಾಮದಲ್ಲಿ ನಡೆದಿದೆ. ಯುವತಿ ಹರ್ಷಿತಾ (21) ಮೃತ ದುರ್ದೈವಿ. ಅದೇ ಗ್ರಾಮದಲ್ಲಿ ವಾಸವಿದ್ದ ಯುವಕ ಶಿವು ಕಿರುಕುಳಕ್ಕೆ ಬೇಸತ್ತು ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಹರ್ಷಿತಾ ಪೋಷಕರು ಆರೋಪಿಸಿದ್ದಾರೆ. ಪಿಯುಸಿ ಓದಿದ್ದ ಹರ್ಷಿತಾ ಕಂಪ್ಯೂಟರ್ ಕ್ಲಾಸ್ಗೆ ಸೇರಿಕೊಂಡಿದ್ದಳು. ಹರ್ಷಿತಾಳನ್ನು ಲವ್ ಮಾಡುತ್ತಿದ್ದ ಶಿವು