ಒಂದೇ ತಿಂಗಳ ಅಂತರದಲ್ಲಿ ಒಂದೇ ತಾಲೂಕಿನಲ್ಲಿ ಚಿರತೆ ದಾಳಿಗೆ ಇಬ್ಬರು ಬಲಿಯಾಗಿದ್ದಾರೆ. ಹೌದು, ಚಿರತೆ ಉಪಟಳದಿಂದಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಜನ ಭಯಭೀತಿಗೊಂಡಿದ್ದಾರೆ. ಗುರುವಾರ ರಾತ್ರಿ ಮನೆ ಮುಂದೆ ಕುಳಿತಿದ್ದ ಯುವತಿ ಮೇಲೆ ದಾಳಿ ಮಾಡಿದ ಚಿರತೆ ಆಕೆಯನ್ನು ಕೊಂದು ಬಿಸಾಕಿದೆ. ತಿಂಗಳ ಹಿಂದೆಯಷ್ಟೇ ಚಿರತೆ ದಾಳಿಯಿಂದ ಟಿ.ನರಸೀಪುರ ತಾಲೂಕಿನ ಎಂ.ಎಲ್.ಹುಂಡಿಯ ಯುವಕನೊಬ್ಬ ಬಲಿಯಾದ. ಅದರ ಕರಾಳ ನೆನಪು ಮಾಸುವ ಮುನ್ನವೇ ಚಿರತೆ ಮತ್ತೊಂದು ಬಲಿಯನ್ನು ಪಡೆದಿದೆ. ಮೈಸೂರು ಜಿಲ್ಲೆ