ಶಿವಮೊಗ್ಗ : ಗಾಂಜಾ ಮತ್ತಿನಲ್ಲಿದ್ದ ಯುವಕರಿಬ್ಬರು ಹಣಕ್ಕಾಗಿ ಪೊಲೀಸ್ ಪೇದೆಯೊಬ್ಬರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಮಂಜುನಾಥ್ ಎಂಬುವವರು ಹಲ್ಲೆಗೊಳಗಾದ ಪೊಲೀಸ್ ಪೇದೆಯಾಗಿದ್ದು, ಇವರು ಕುಂಸಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇವರು ಮಂಗಳವಾರ ರಾತ್ರಿ ಶಿವಮೊಗ್ಗ ಬಸ್ ನಿಲ್ದಾಣದಲ್ಲಿದ್ದಾಗ ಇಬ್ಬರು ಯುವಕರು ಮಂಜುನಾಥ್ ಬಳಿ ಬಂದು ಹಣ ಕೇಳಿದ್ದಾರೆ. ಹಣ ನೀಡುವುದಿಲ್ಲ ಎಂದಿದ್ದಕ್ಕೆ ಕೋಪಗೊಂಡ ಯುವಕರು ಕುತ್ತಿಗೆ, ಕೈ-