ಕಾಂಗ್ರೆಸ್ ಪಕ್ಷದ ಐದನೇ ಗ್ಯಾರಂಟಿಯಾದ ಯುವ ನಿಧಿ ಯೋಜನೆ 2024ರ ಜನವರಿಯಲ್ಲಿ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ಭಾನುವಾರ ಪಾಲ್ಗೊಂಡಿದ್ದ ಅವರು, ಈ ವಿಷಯ ತಿಳಿಸಿದರು. ಪದವಿ, ಡಿಪ್ಲೊಮಾ ಪಡೆದು ನಿರುದ್ಯೋಗಿಗಳಾಗಿರುವವರಿಗೆ ಯುವ ನಿಧಿ ಸಿಗಲಿದೆ. 2022-23ನೇ ಸಾಲಿನಲ್ಲಿ ಪದವಿ ಪಡೆದ ಯುವಜನರಿಗೆ ಎರಡು ವರ್ಷಗಳವರೆಗೆ ತಿಂಗಳಿಗೆ 3.000 ಹಾಗೂ ಡಿಪ್ಲೊಮಾ ಮಾಡಿದ ಯುವಜನರಿಗೆ ಎರಡು ವರ್ಷಗಳವರೆಗೆ