ಕಾಂಗ್ರೆಸ್ ಪಕ್ಷ ಸೇರಲು ತುದಿಗಾಲ ಮೇಲೆ ನಿಂತಿರುವ ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್, ಇಂದು ಇಂದಿರಾ ಕ್ಯಾಂಟಿನ್ಗೆ ಭೇಟಿ ನೀಡಿ ಆಹಾರ ಸೇವಿಸಿದ್ದಾರೆ. ಇಂದು ಬೆಳಿಗ್ಗೆ ಚಾಮರಾಜಪೇಟೆಯಲ್ಲಿರುವ ಇಂದಿರಾ ಕ್ಯಾಂಟಿನ್ಗೆ ಭೇಟಿ ನೀಡಿದ ಅವರು, ಬಡವರಿಗೆ, ಮಧ್ಯಮ ವರ್ಗದವರಿಗೆ ಕಡಿಮೆ ದರದಲ್ಲಿ ಆಹಾರ ದೊರೆಯುತ್ತಿರುವುದು ಸಂತಸದ ಸಂಗತಿ ಎಂದು ತಿಳಿಸಿದ್ದಾರೆ. ಇಂದಿರಾ ಕ್ಯಾಂಟಿನ್ನಲ್ಲಿ ಕಟ್ಟಡ, ಸ್ವಚ್ಚತೆ ಪರಿಶೀಲಿಸಿ, ಸಿಬ್ಬಂದಿಯೊಂದಿಗೆ ಕೆಲ ಕಾಲ ಚರ್ಚೆ ನಡೆಸಿದ ನಂತರ ಸಾರ್ವಜನಿಕರೊಂದಿಗೆ