ಬೆಂಗಳೂರು : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸೇರಿ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವುದಕ್ಕೆ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಬಾರದಿತ್ತು ಎಂದು ಸಚಿವ, ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಮಾಡಿಕೊಳ್ಳಬಾರದಿತ್ತು. ಮೈತ್ರಿ ಮಾಡಿಕೊಳ್ಳದಿದ್ದರೆ, ಕಾಂಗ್ರೆಸ್ ಪಕ್ಷ 10 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಅವಕಾಶವಿತ್ತು. ಆದರೆ, ಮೈತ್ರಿ ಬಗ್ಗೆ ವರಿಷ್ಠರ ತೀರ್ಮಾನವೇ ಅಂತಿಮ. ಮೈತ್ರಿ ಬೇಡವಾಗಿತ್ತು ಎನ್ನುವುದು