Widgets Magazine

ಸೋಮಶೇಖರ್ ಮನೆ ಮುಂದೆ ಜಮೀರ್ ಅಹಮ್ಮದ್ ಬೆಂಬಲಿಗರಿಂದ ಪ್ರತಿಭಟನೆ

ಬಳ್ಳಾರಿ| pavithra| Last Updated: ಸೋಮವಾರ, 13 ಜನವರಿ 2020 (11:01 IST)
ಬಳ್ಳಾರಿ : ಶಾಸಕ ಸೋಮಸೇಖರ್ ರೆಡ್ಡಿ ಪ್ರಚೋದನಾಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸೋಮಶೇಖರ್ ರೆಡ್ಡಿ ಅವರ ಮನೆಮುಂದೆ  ಮಾಜಿ ಸಚಿವ ಜಮೀರ್ ಅಹಮ್ಮದ್ ಬೆಂಬಲಿಗರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.ಸೋಮಶೇಖರ್ ಮನೆ ಮುಂದೆ ಜಮೀರ್ ಅಹಮ್ಮದ್ ಪ್ರತಿಭಟನೆ ನಡೆಸಲು ಅನುಮತಿ ಇಲ್ಲದಿದ್ರೂ ಪ್ರೊಟೆಸ್ಟ್ ಮಾಡಲು ಜಮೀರ್ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ.


ಬಳ್ಳಾರಿ ನಗರದ ಹೊಸಪೇಟೆ ರಸ್ತೆಯ ಕಂಟ್ರಿ ಕ್ಲಬ್ ಬಳಿ ಜಮೀರ್ ಬೆಂಬಲಿಗರು ಧರಣಿ ನಡೆಸಲಿದ್ದು, ಈ ಹಿನ್ನಲೆಯಲ್ಲಿ ರೆಡ್ಡಿ ನಿವಾಸದ ಸುತ್ತಮುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಇದರಲ್ಲಿ ಇನ್ನಷ್ಟು ಓದಿ :