ಮೈತ್ರಿ ಪಕ್ಷಗಳ ಗೊಂದಲ ಸದ್ಯಕ್ಕೆ ಬಗೆಹರಿಯುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ಹೀಗಂತ ಮಾಜಿ ಸಿಎಂ ಹಾಗೂ ಬಿಜೆಪಿ ಹಿರಿಯ ಮುಖಂಡ ವ್ಯಂಗ್ಯವಾಡಿದ್ದಾರೆ.ಮೈಸೂರಿನಲ್ಲಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಹೇಳಿಕೆ ನೀಡಿದ್ದು, ಬಿಜೆಪಿ ಎಲ್ಲೆಲ್ಲಿ ಹೇಳುತ್ತದೆಯೋ ಅಲ್ಲಿಗೆ ಪ್ರಚಾರಕ್ಕೆ ಹೋಗುತ್ತೇನೆ ಎಂದರು.ಇನ್ನು ಮಾಯಾವತಿ ಮೈಸೂರು ಪ್ರವಾಸ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮಾಯವತಿ ಒಬ್ಬರು ಪ್ರಭಾವಿ ರಾಜಕಾರಣಿ. ಅವರು ಈಗಾಗಲೇ ಕಾಂಗ್ರೆಸ್ ಜತೆ ಹೋಗಲ್ಲ ಅಂತ ಹೇಳಿದ್ದಾರೆ. ಮೈಸೂರಿನಲ್ಲಿ ಅವರು ಬರುವುದರಿಂದ ಪರಿಣಾಮ ಬೀರಬಹುದು.