[$--lok#2019#state#karnataka--$] ತುಮಕೂರು ಕ್ಷೇತ್ರ 2019ರಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಜೆಡಿಎಸ್ ನಿಂದ ಸ್ಪರ್ಧೆ ಮಾಡಿರುವುದಕ್ಕೆ ಗಮನ ಸೆಳೆದಿದೆ. ಬಿಜೆಪಿಯಿಂದ ಹಾಲಿ ಸಂಸದ ಜಿ.ಎಸ್.ಬಸವರಾಜು ಕಣದಲ್ಲಿದ್ದಾರೆ. ಕಾಂಗ್ರೆಸ್ ಭದ್ರಕೋಟೆಯಲ್ಲಿ ಇಬ್ಬರೂ ಹಿರಿಯ ಮುತ್ಸದ್ದಿಗಳು ಚುನಾವಣೆ ಎದುರಿಸುತ್ತಿದ್ದಾರೆ. ಬಿ.ಜೆ.ಪಿಯ ಜಿ.ಎಸ್.ಬಸವರಾಜು ಕಾಂಗ್ರೆಸ್ ನಿಂದ ಮೂರು ಬಾರಿ ಹಾಗೂ ಬಿಜೆಪಿಯಿಂದ ಒಂದು ಬಾರಿ ಲೋಕಸಭೆ ಪ್ರವೇಶ ಮಾಡಿದ್ದಾರೆ. ಇವರ ರಾಜಕೀಯ ಎದುರಾಳಿ ಜೆಡಿಎಸ್ ನ ಹೆಚ್.ಡಿ.ದೇವೇಗೌಡರು ಮಾಜಿ ಪ್ರಧಾನಿಗಳು ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ.