ಆಮ್ ಆದ್ಮಿ ಪಕ್ಷದ 20 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ| ವೆಬ್‌ದುನಿಯಾ| Last Updated: ಮಂಗಳವಾರ, 15 ಏಪ್ರಿಲ್ 2014 (10:52 IST)
PR
ದೆಹಲಿ ಸರ್ಕಾರಕ್ಕೆ ರಾಜೀನಾಮೆ ನೀಡಿದ ಎರಡು ದಿನಗಳಲ್ಲೇ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಮುಂಬರುವ ಲೋಕಸಭೆ ಚುನಾವಣೆ ಮೇಲೆ ತನ್ನ ಗಮನಹರಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಿಗೆ ಟಾಂಗ್ ನೀಡಲು ಲೋಕಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಪಕ್ಷ 20 ಅಭ್ಯರ್ಥಿಗಳ ಹೆಸರಿನ ಮೊದಲ ಪಟ್ಟಿಯನ್ನು ಅಂತಿಮಗೊಳಿಸಿದೆ. ಮಾಜಿ ಪತ್ರಕರ್ತ ಮತ್ತು ಎಎಪಿ ವಕ್ತಾರ ಅಶುತೋಷ್ ಕೇಂದ್ರ ಸಚಿವ ಕಪಿಲ್ ಸಿಬಲ್ ವಿರುದ್ಧ ದೆಹಲಿಯ ಚಾಂದ್ನಿ ಚೌಕ್ ಸ್ಥಾನಕ್ಕೆ ಸ್ಫರ್ಧಿಸುವುದನ್ನು ಪ್ರಕಟಿಸಿದೆ. ಮುಕುಲ್ ತ್ರಿಪಾಠಿ ಅವರು ವಿದೇಶಾಂಗ ಸಚಿವ ಸಲ್ಮಾನ್ ಖುರ್ಷಿದ್ ವಿರುದ್ಧ ಫರುಕಾಬಾದ್ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :