ನರೇಂದ್ರ ಮೋದಿ ಬಿಜೆಪಿ ಪಕ್ಷಕ್ಕೆ ಭಸ್ಮಾಸುರನಂತೆ: ದಿಗ್ವಿಜಯ್ ಸಿಂಗ್

ಶುಕ್ರವಾರ, 14 ಮಾರ್ಚ್ 2014 (15:19 IST)

PR
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಭಸ್ಮಾಸುರನಂತೆ. ತನ್ನನ್ನು ಬೆಳಿಸಿದ ಪಕ್ಷದ ನಾಯಕರನ್ನು ಈಗಾಗಲೇ ತಿಂದು ತೇಗಿದ್ದಾರೆ. ಇದೀಗ ಬಿಜೆಪಿ ಪಕ್ಷವನ್ನೇ ನುಂಗುವ ಹವಣಿಕೆಯಲ್ಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು , ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಗುಜರಾತಿನ ಮಾಜಿ ಸಿಎಂ ಕೇಶುಭಾಯಿ ಪಟೇಲ್, ವಿಎಚ್ಪಿ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಪ್ರವೀಣ ತೊಗಾಡಿಯಾ, ದೀಪಸಿಂಗ್ ವಾಘೇಲ, ಕಾಶಿರಾಮ ರಾಣಾ, ಲಾಲಕೃಷ್ಣ ಆಡ್ವಾಣಿ ಅವರಂಥ ನಾಯಕರೇ ಕೈ ಹಿಡಿದು ರಾಜಕೀಯವಾಗಿ ಬೆಳೆಸಿದರು. ಅವರನ್ನೇ ಮೋದಿ ಮೂಲೆಗುಂಪು ಮಾಡುವ ಕೆಲಸ ಮಾಡಿದ್ದಾರೆ. ಈಗ ಮೋದಿಯನ್ನು ಹೋದಲ್ಲೆಲ್ಲಾ ಕೊಂಡಾಡುವ ರಾಜನಾಥ ಸಿಂಗ್ ಕೂಡಾ ಶೀಘ್ರದಲ್ಲಿ ಮೂಲೆಗುಂಪಾಗಲಿದ್ದಾರೆ ಎಂದು ಭವಿಷ್ಯ ನುಡಿದರು.

ಸೋನಿಯಾ ಗಾಂಧಿ ಮತ್ತು ಮನಮೋಹನ ಸಿಂಗ್ ಅವರಿಂದಾಗಿ ಮಾಹಿತಿ ಹಕ್ಕು ಕಾಯ್ದೆ, ಉಚಿತ ಕಡ್ಡಾಯ ಶಿಕ್ಷಣ, ಆಹಾರ ಭದ್ರತೆ ಕಾಯ್ದೆ, ನರೇಗಾ, ಲೋಕಪಾಲದಂಥ ಕಾನೂನು ಜಾರಿಗೆ ಬಂದಿದೆ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸಾರ್ವತ್ರಿಕ ಚುನಾವಣೆ 2014

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ : ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ...

ಅನಗತ್ಯ ಬೆಂಬಲ ಏಕೆ ನೀಡುತ್ತೀರಿ?: ಠಾಕ್ರೆಯನ್ನು ಪ್ರಶ್ನಿಸಿದ ರಾಜನಾಥ್ ಸಿಂಗ್

ಚುನಾವಣೆಯ ನಂತರ ನರೇಂದ್ರ ಮೋದಿಗೆ ಬೆಂಬಲವನ್ನು ನೀಡುತ್ತೇವೆ ಎಂಬ, ಎಂಎನ್ಎಸ್ ಅಧ್ಯಕ್ಷ ರಾಜ್ ಠಾಕ್ರೆ ...

ನಾವು ಮೋದಿಯನ್ನು ಸಮುದ್ರಕ್ಕೆ ಎಸೆಯುತ್ತೇವೆ :ಅಜಿತ್ ಸಿಂಗ್

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಉತ್ತರಪ್ರದೇಶ ಕೋಮುವಾದದ ಬೆಂಕಿಯಿಂದ ಹೊತ್ತಿ ...

ಚುನಾವಣಾ ಆಯೋಗದ ಆದೇಶಕ್ಕೆ ಕೊನೆಗೂ ತಲೆಬಾಗಿದ ಮಮತಾ

ಚುನಾವಣಾ ಆಯೋಗದ ನಿರ್ದೇಶನದಂತೆ ಸರಕಾರಿ ಅಧಿಕಾರಿಗಳನ್ನು ವರ್ಗಾಯಿಸಲು ಮಮತಾ ಬ್ಯಾನರ್ಜಿ ಸರಕಾರ ...