ಲೋಕಸಭೆಯಲ್ಲಿ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ಬಿಜೆಪಿ ಗುರಿ

ವೆಬ್‌ದುನಿಯಾ| Last Updated: ಮಂಗಳವಾರ, 15 ಏಪ್ರಿಲ್ 2014 (10:52 IST)
PR
ದೆಹಲಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಅಂತ್ಯಗೊಂಡಿದ್ದು, ವಾರದೊಳಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ಸಭೆ ಬಳಿಕ ಸಂಸದ ಅನಂತಕುಮಾರ್ ಹೇಳಿದ್ದಾರೆ. 20ಕ್ಕೂ ಹೆಚ್ಚು ಸೀಟು ಗೆಲ್ಲುವುದು ನಮ್ಮ ಗುರಿಯಾಗಿದ್ದು, ಮೋದಿ ರ‌್ಯಾಲಿ ಬಗ್ಗೆ ಮತ್ತು ಸೋತವರಿಗೆ ಟಿಕೆಟ್ ನೀಡುವ ಬಗ್ಗೆ ಕೂಡ ಚರ್ಚೆ ನಡೆಯಿತು. ಈ ಬಗ್ಗೆ ವರಿಷ್ಠರ ನಿರ್ಧಾರ ಅಂತಿಮವಾಗಿದ್ದು, ದಾವಣಗೆರೆ, ಗುಲ್ಬರ್ಗಾ, ಮಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಮೋದಿ ಚುನಾವಣೆ ರ‌್ಯಾಲಿ ನಡೆಯಲಿದೆ ಎಂದು ಅನಂತಕುಮಾರ್ ಹೇಳಿದರು. ಸಂಸದ ಜಿ.ಎಸ್. ಬಸವರಾಜುಗೆ ಟಿಕೆಟ್ ನೀಡಿಕೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಬಸವರಾಜು ಬಿಜೆಪಿಯಿಂದ ಅಮಾನತಾಗಿದ್ದರು ಎಂದು ಪ್ರಹ್ಲಾದ್ ಜೋಷಿ ಹೇಳಿದರು.


ಇದರಲ್ಲಿ ಇನ್ನಷ್ಟು ಓದಿ :