ಬೆಂಗಳೂರು (ಸೆ.01): ಬಂಗಾರದ ಮೇಲೆ ಹೂಡಿಕೆ ಮಾಡೋದು ಒಂದು ರೀತಿ ಭದ್ರತೆಯ ಪ್ರತೀಕ. ಇಂದು ಕೊಂಡ ಒಂದಿಷ್ಟೇ ಬಂಗಾರ ಕೆಲ ಸಮಯದ ನಂತರ ಭಾರೀ ಲಾಭ ತಂದುಕೊಡುತ್ತದೆ. ಬಹುಶಃ ಹಣದುಬ್ಬರದ ಪ್ರತೀ ಏರಿಳಿಕೆಯಲ್ಲೂ ಉತ್ತಮ ಬೆಲೆ ಕಾಯ್ದಿರಿಸಿಕೊಂಡಿರುವ ಏಕೈಕ ವಸ್ತು ಚಿನ್ನವೇ. ಹಾಗಾಗಿ ಪ್ರತಿದಿನ ದಿನಕ್ಕೆರಡು ಬಾರಿ ಚಿನ್ನದ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಏರಿಳಿತವಾದರೂ ಜನರಿಗೆ ಅದರಲ್ಲಿ ಆಸಕ್ತಿ ಒಂಚೂರೂ ಕಡಿಮೆ ಆಗೋದೇ ಇಲ್ಲ. ಒಂದು ಕಡೆ ಹೂಡಿಕೆಯ