ನವದೆಹಲಿ: ಮದುವೆಯಾಗುವುದಾಗಿ ನಂಬಿಸಿ 35 ವರ್ಷ ವಯಸ್ಸಿನ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಬಿಎಸ್ಪಿ ಶಾಸಕನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ನಾಲ್ಕು ವರ್ಷಗಳ ಹಿಂದೆ 40 ವರ್ಷ ವಯಸ್ಸಿನ ಆರೋಪಿ ಶಿವಭೂಷಣ್, ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದಾನೆ. ಅತನಿಂದ ಮಗುವನ್ನು ಪಡೆದಿದ್ದೇನೆ ಎಂದು ಅತ್ಯಾಚಾರಕ್ಕೊಳಗಾದ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.