ಆಮ್ ಆದ್ಮಿ ಪಕ್ಷದ 350ಕ್ಕಿಂತ ಹೆಚ್ಚು ಅಭ್ಯರ್ಥಿಗಳು ಕಣಕ್ಕೆ

ನವದೆಹಲಿ| ವೆಬ್‌ದುನಿಯಾ| Last Modified ಗುರುವಾರ, 30 ಜನವರಿ 2014 (18:47 IST)
PR
PR
ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಮೇನಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ 350ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಅಪರಾಧ ಚಟುವಟಿಕೆಗಳ ಆರೋಪ ಹೊತ್ತಿರುವ ಬೇರೆ ಪಕ್ಷಗಳ ರಾಜಕಾರಣಿಗಳ ವಿರುದ್ಧ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಕ್ಕೆ ಆಮ್ ಆದ್ಮಿ ಹೆಚ್ಚು ಗಮನವಹಿಸಿದೆ. ದೆಹಲಿಯಲ್ಲಿ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಕ್ರಿಮಿನಲ್ ಹಿನ್ನೆಲೆಯ ಹೊಂದಿರುವ 162 ಸದಸ್ಯರ ವಿರುದ್ಧ ತಮ್ಮ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಕ್ಕೆ ಆದ್ಯತೆ ನೀಡುತ್ತದೆ ಎಂದು ಎಎಪಿ ತಿಳಿಸಿದೆ.ಕಳೆದ ತಿಂಗಳು ದೆಹಲಿ ಚುನಾವಣೆಯಲ್ಲಿ ಪಕ್ಷದ ಉತ್ತಮ ಸಾಧನೆ ಹಿನ್ನೆಲೆಯಲ್ಲಿ ಎಎಪಿಯ ಆಸಕ್ತಿ ಹೆಚ್ಚಿದೆ.


ಇದರಲ್ಲಿ ಇನ್ನಷ್ಟು ಓದಿ :