ಹೈದ್ರಾಬಾದ್: ದೆಹಲಿ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ ಆಮ್ ಆದ್ಮಿ ಪಕ್ಷವನ್ನು ಲಘುವಾಗಿ ಪರಿಗಣಿಸಬೇಡಿ ಎಂದು ಆರೆಸ್ಸೆಸ್ ಬಿಜೆಪಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ. ಹೈದ್ರಾಬಾದ್ನಲ್ಲಿ ನಡೆದ ಮೂರು ದಿನಗಳ ಕಾರ್ಯಕಾರಿ ಸಭೆಯಲ್ಲಿ ಆಮ್ ಆದ್ಮಿ ಪಕ್ಷದ ಬೆಳವಣಿಗೆ ಬಗ್ಗೆ ಚರ್ಚಿಸಲಾಯಿತು ಎಂದು ಮೂಲಗಳು ತಿಳಿಸಿವೆ.