ನವದೆಹಲಿ: ಆಮ್ ಆದ್ಮಿ ಪಕ್ಷ ಕಾಂಗ್ರೆಸ್ ಪಕ್ಷದ ಬಾಹ್ಯ ಬೆಂಬಲ ಪಡೆದು ಸರಕಾರ ರಚಿಸಲು ಹೊರಟಿದ್ದು ಜನತೆಯನ್ನು ವಂಚಿಸಿದೆ ಎಂದು ಬಿಜೆಪಿ ಕಿಡಿಕಾರಿದೆ. ಕಾಂಗ್ರೆಸ್ ಪಕ್ಷದ ಬೆಂಬಲ ಪಡೆದು ಸರಕಾರ ರಚಿಸಲು ಹೊರಡಿರುವ ಆಮ್ ಆದ್ಮಿ ಪಕ್ಷದ ಮುಖಂಡರು ಅಧಿಕಾರಕ್ಕಾಗಿ ಯಾವ ರೀತಿ ಹಪಾಹಪಿ ನಡೆಸುತ್ತಿದ್ದಾರೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಹರ್ಷವರ್ಧನ್ ಆರೋಪಿಸಿದ್ದಾರೆ.