Widgets Magazine

ಓ.. ಮೈ...ಗಾಡ್... ಬಸ್‌ಸ್ಟ್ಯಾಂಡ್‌ನಲ್ಲಿಯೇ ಮಹಿಳೆಯ ಮೇಲೆ ಗ್ಯಾಂಗ್‌ರೇಪ್

ಹೈದ್ರಾಬಾದ್| ರಾಜೇಶ್ ಪಾಟೀಲ್|
ಆಂಧ್ರಪ್ರದೇಶದ ಮೆಹಬೂಬ್‌ ಜಿಲ್ಲೆಯ ಕೋಠ್‌ಕೋಟಾ ಪಟ್ಟಣದ ಬಸ್‌ನಿಲ್ದಾಣದಲ್ಲಿ 35 ವರ್ಷ ವಯಸ್ಸಿನ ಮಹಿಳೆಯ ಮೇಲೆ ಪೊಲೀಸ್ ಪೇದೆ, ಹೋಂಗಾರ್ಡ್ ಸೇರಿದಂತೆ ಇತರ ಇಬ್ಬರು ಆರೋಪಿಗಳು ಅತ್ಯಾಚಾರವೆಸಗಿದ ದಾರುಣ ಘಟನೆ ವರದಿಯಾಗಿದೆ.

ಗ್ಯಾಂಗ್‌ರೇಪ್‌ಗೆ ಸಂಬಂಧಿಸಿದಂತೆ ಪೊಲೀಸ್ ಪೇದೆ ಮತ್ತು ಹೋಂ ಗಾರ್ಡ್ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಸ್‌ನಿಲ್ದಾಣದಲ್ಲಿ ರಾತ್ರಿ 1 ಗಂಟೆ ಸುಮಾರಿಗೆ ಬಸ್‌ಗಾಗಿ ಕಾಯುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಂದ್ರ ಕುಮಾರ್ ತಿಳಿಸಿದ್ದಾರೆ.

ಪೊಲೀಸ್ ಪೇದೆ ಸೀನು, ಹೋಂಗಾರ್ಡ್ ನಾಗೇಂದ್ರನ್ ಮತ್ತು ಖಾಸಗಿ ಕಂಪೆನಿಯ ಉದ್ಯೋಗಿಗಳಾದ ರಮೇಶ್ ಮತ್ತು ರಾಕೇಶ್ ಎನ್ನುವ ಆರೋಪಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಆರೋಪಿಗಳ ವಿರುದ್ಧ ಅತ್ಯಾಚಾರ, ಲೈಂಗಿಕ ಕಿರುಕುಳ ಸೇರಿದಂತೆ ಇತರ ಸೆಕ್ಷನ್‌ಗಳನ್ನು ದಾಖಲಿಸಲಾಗಿದೆ ಎಂದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಇದರಲ್ಲಿ ಇನ್ನಷ್ಟು ಓದಿ :