ನವದೆಹಲಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿಯವರೊಂದಿಗೆ ರಹಸ್ಯ ಮಾತುಕತೆ ನಡೆಸಿರುವ ವರದಿಗಳು ಆಧಾರ ರಹಿತ ಮತ್ತು ಸುಳ್ಳಿನಿಂದ ಕೂಡಿವೆ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ನವದೆಹಲಿಯಲ್ಲಿ ಜನೆವರಿ 17 ರಂದು ಮೋದಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿರುವ ವರದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಕೇಂದ್ರ ಕೃಷಿ ಖಾತೆ ಸಚಿವ ಶರದ್ ಪವಾರ್ ಹೇಳಿದ್ದಾರೆ.