ಮುಂಬೈ: ಬಿಜೆಪಿಯ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮುಸ್ಲಿಮರನ್ನು ಓಲೈಸುವುದರಲ್ಲಿ ನಿರತರಾಗಿದ್ದಾರೆ ಎಂದು ಎನ್ಡಿಎ ಮೈತ್ರಿಕೂಟದ ಶಿವಸೇನೆ ಪಕ್ಷದ ಮುಖ್ಯಸ್ಥ ಉದ್ಭವ್ ಠಾಕ್ರೆ ಕಿಡಿಕಾರಿದ್ದಾರೆ. ನರೇಂದ್ರ ಮೋದಿಯವರ ಸಾರ್ವಜನಿಕ ಸಭೆಗೆ ಮುಸ್ಲಿಮರನ್ನು ಕರೆತರಲು ವಿಶೇಷ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಬದಲು ಅಲ್ಪ ಸಂಖ್ಯಾತರನ್ನು ಓಲೈಸಲು ಬಿಜೆಪಿ ನಾಯಕರು ಪೈಪೋಟಿಯಲ್ಲಿದ್ದಾರೆ ಎಂದು ಲೇವಡಿ ಮಾಡಿದರು.