Widgets Magazine

ನರೇಂದ್ರ ಮೋದಿ, ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆ: ಮಾಯಾವತಿ

ಮೊರೆನಾ| ರಾಜೇಶ್ ಪಾಟೀಲ್|
PTI
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆಯಾಗಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಆರೋಪಿಸಿದ್ದಾರೆ.

ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ದೇಶಕ್ಕೆ ಬಹುದೊಡ್ಡ ಬೆದರಿಕೆಯಾಗಿದ್ದಾರೆ ಎನ್ನುವುದರಲ್ಲಿ ನನಗೆ ಸಂಶಯವಿಲ್ಲ ಎಂದು ಚುನಾವಣೆ ಪ್ರಚಾರ ಸಭೆಯಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ರಾಹುಲ್ ಗಾಂಧಿಯವರನ್ನು ಪ್ರಧಾನಿಯಾಗಿಸಬೇಕು ಎನ್ನುವ ಉದ್ದೇಶ ಹೊಂದಿದೆ ಆದರೆ, ಇಲ್ಲಿಯವರೆಗೆ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿಲ್ಲ. ಮತ್ತೊಂದೆಡೆ 2002ರ ಗುಜರಾತ್ ಗಲಭೆಯ ರೂವಾರಿಯಾದ ನರೇಂದ್ರ ಮೋದಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಜೆಪಿ ಘೋಷಿಸಿದೆ

ಗುಜರಾತ್ ಗಲಭೆಯ ರೂವಾರಿಯಾದ ಮೋದಿಯನ್ನು ಕ್ಷಮಿಸಲು ದೇಶದ ಜನತೆಗೆ ಸಾಧ್ಯವಿಲ್ಲ ಎನ್ನುವುದು ನನ್ನ ಭಾವನೆ. ಮತ್ತೊಂದೆಡೆ ರಾಹುಲ್ ಗಾಂಧಿ ಅನನುಭವಿಯಾಗಿದ್ದು, ದೇಶದ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಎನ್ನುವುದು ನಂಬಲು ಸಾಧ್ಯವಿಲ್ಲ ಎಂದರು.

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಬಂಡವಾಳಶಾಹಿಗಳ ಬೆಂಬಲದೊಂದಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಲ್ಲಿ ಬಂಡವಾಳಶಾಹಿಗಳ ಪರ ಆರ್ಥಿಕ ನೀತಿಗಳನ್ನು ರೂಪಿಸಬೇಕಾಗುತ್ತದೆ ಎಂದು ಆರೋಪಿಸಿದ್ದಾರೆ.

ಕೇಂದ್ರ ಸರಕಾರ ಬಂಡವಾಳಶಾಹಿಗಳ ಪರಿವಾದಲ್ಲಿ ದೇಶದಲ್ಲಿರುವ ಬಡವರು, ದಲಿತರು ನಿರಂತರವಾಗಿ ಶೋಷಣೆಗೊಳಗಾಗುತ್ತಾರೆ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಜಿ ಮುಖ್ಯಮಂತ್ರಿ ಮಾಯಾವತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :