ರಾಂಚಿ: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ದೇವರು ಶ್ರೀರಾಮನ ಅವತಾರ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜನಾಥ್ ಸಿಂಗ್ ಹೋಲಿಸಿದ್ದಾರೆ. ರಾಮಾಯಣದಲ್ಲಿ ಶ್ರೀರಾಮನು ಅಯೋಧ್ಯೆಯ ರಾಜನಾಗಬಾರದು ಎನ್ನುವ ಉದ್ದೇಶದಿಂದ ಮಂಥರೆ ರೂಪಿಸಿದ ಸಂಚಿನಂತೆ, ಇದೀಗ ಮೋದಿ ಪ್ರಧಾನಿಯಾಗಬಾರದು ಎಂದು ಕಾಂಗ್ರೆಸ್ ಸಂಚು ರೂಪಿಸುತ್ತಿದೆ ಎಂದು ಸಾರ್ವಜನಿಕ ಸಭೆಯಲ್ಲಿ ಹೇಳಿಕೆ ನೀಡಿದ್ದಾರೆ.