ಆಗ್ರಾ: ಮಲಮಗಳ ಮೇಲೆ ಅತ್ಯಾಚಾರವೆಸಗಿ ವೇಶ್ಯಾವಾಟಿಕೆ ಜಾಲಕ್ಕೆ ಮಾರಾಟ ಮಾಡಲು ಯತ್ನಿಸಿ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಅಟೋರಿಕ್ಷಾ ಚಾಲಕನಾದ ಆರೋಪಿ ಕಳೆದ ಎರಡು ವರ್ಷಗಳಿಂದ ಮಲಮಗಳ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಬಾಲಕಿಯನ್ನು ವೇಶ್ಯಾವಾಟಿಕೆ ಜಾಲಕ್ಕೆ ಮಾರಾಟ ಮಾಡುವ ಸುಳಿವು ತಿಳಿದ ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.