Widgets Magazine

ಲೋಕಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಡುಗಡೆ

ನವದೆಹಲಿ| ರಾಜೇಶ್ ಪಾಟೀಲ್|
PTI
ಮುಂಬರುವ 2014ರ ಲೋಕಸಭೆ ಚುನಾವಣೆಯ 150 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಜನೆವರಿ ತಿಂಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷ ಆಯಾ ರಾಜ್ಯಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸುವುದಿಲ್ಲ. ಒಟ್ಟಾರೆ ದೇಶಾದ್ಯಂತ 150 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ 2009ರ ಚುನಾವಣೆಯಲ್ಲಿ 20 ಸಾವಿರ ಮತಗಳಿಗೂ ಹೆಚ್ಚಿನ ಅಂತರದಿಂದ ಜಯಗಳಿಸಿದ ಅಭ್ಯರ್ಥಿಗಳನ್ನು ಮೊದಲ ಪಟ್ಟಿಯಲ್ಲಿ ಬಿಡುಗಡೆಗೊಳಿಸಲಾಗುವುದು. ನಂತರ 10 ಸಾವಿರ- 20 ಸಾವಿರ ಅಂತರದಿಂದ ಗೆಲುವು ಸಾಧಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಪಕ್ಷದ ಭಧ್ರಕೋಟೆಯಿರುವ ಕ್ಷೇತ್ರಗಳಲ್ಲಿ ಜಯಗಳಿಸುವ ವಿಶ್ವಾಸವಿರುವುದರಿಂದ 150 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ.


ಇದರಲ್ಲಿ ಇನ್ನಷ್ಟು ಓದಿ :