ಲೋಕಸಭೆ ಚುನಾವಣೆ: ಚುನಾವಣಾಧಿಕಾರಿಯಿಂದ 51 ನಾಮಪತ್ರಗಳು ಅಸಿಂಧು

ಬೆಂಗಳೂರು, ಗುರುವಾರ, 27 ಮಾರ್ಚ್ 2014 (20:26 IST)

PR
ರಾಜ್ಯದ 28 ಲೋಕಸಭಾ ಚುನಾವಣಾ ಕ್ಷೇತ್ರಗಳಿಗೆ ಸುಮಾರು 916 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಅದರಲ್ಲಿ 51 ನಾಮಪತ್ರ ತಿರಸ್ಕೃತಗೊಂಡಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್ ಕುಮಾರ್ ಝಾ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿದ ಚುನಾವಣಾಧಿಕಾರಿ, ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಿನ್ನೆ ಕೊನೆಯ ದಿನವಾಗಿತ್ತು. ಆ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷದ ಹುರಿಯಾಳುಗಳು ನಾಮಪತ್ರ ಸಲ್ಲಿಸಿದ್ದರು. 28 ಕ್ಷೇತ್ರಗಳ ಪೈಕಿ 916 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು,. ಅದರಲ್ಲಿ 51 ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ ಎಂದರು.

ಎಲ್ಲಾ ಜಿಲ್ಲೆಗಳ ಪೈಕಿ ಬೀದರ್‌ನಲ್ಲೇ ಒಟ್ಟು 38 ಅಭ್ಯರ್ಥಿಗಳು ಕಣದಲ್ಲಿದ್ದು,. ಉತ್ತರ ಕನ್ನಡ ಜಿಲ್ಲೆಯಲ್ಲಿ ಅತೀ ಕಡಿಮೆ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಸದ್ಯ 552 ಅಭ್ಯರ್ಥಿಗಳು ಕಣದಲ್ಲಿದ್ದು, ನಾಮಪತ್ರ ಹಿಂಪಡೆಯಲು ನಾಳೆ ಕೊನೆಯ ದಿನವಾಗಿರುವುದರಿಂದ ಈ ಸಂಖ್ಯೆ ಇಳಿಯುವ ಸಾಧ್ಯತೆಯಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ...

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ...

ಮೋದಿ ಪ್ರಧಾನಿಯಾಗೋಲ್ಲ, ಯುಪಿಎ ಅಧಿಕಾರಕ್ಕೆ ಬರ್ತದೆ: ಇಬ್ರಾಹಿಂ ಭವಿಷ್ಯ

ಮಂಗಳೂರು: ನರೇಂದ್ರ ಮೋದಿ ಪ್ರಧಾನಮಂತ್ರಿ ಆಗೋದಿಲ್ಲ. ಯುಪಿಎ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ. ಈ ಬಾರಿ ...

ಹಾಸನದಲ್ಲಿ ಮತ್ತೆ ದೇವೇಗೌಡರ ಕೊರಳಿಗೆ ವಿಜಯಮಾಲೆ ಬೀಳುತ್ತಾ?

ಮಾಜಿ ಪ್ರಧಾನಿಯ ಕ್ಷೇತ್ರ ಹಾಸನ ಕೂಡ ಸಮಸ್ಯೆಗಳಿಂದ ಹೊರತಾಗಿಲ್ಲ. ಮಾಜಿ ಪ್ರಧಾನಿಯ ತವರು ಎನ್ನುವ ಖ್ಯಾತಿ ...