ನವದೆಹಲಿ: ನಿತೀಶ್ ಕುಮಾರ್ ಬಿಹಾರ ಸಿಎಂ ಅಲ್ಲ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಕೆಲಸಗಾರನಂತೆ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ನಿತೀಶ್ ಕುಮಾರ್ ಮಹಾಘಟಬಂಧನದಿಂದ ಹಿಂದೆ ಸರಿಯುತ್ತಿರುವುದಾಗಿ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ಈ ಆರೋಪ ಮಾಡಿದೆ.ನಿತೀಶ್ ನಡೆಯಿಂದಾಗಿ ಅವರ ಪಕ್ಷದಲ್ಲಿರುವ ಹಲವು ನಾಯಕರು ಭಯಭೀತರಾಗಿದ್ದಾರೆ. ಇಂತಹ ಕೆಲಸವನ್ನು ಹಿಂದೆ ಯಾರೂ ಮಾಡಿಲ್ಲ. ನಿತೀಶ್ ಪಕ್ಷದ ನಾಯಕರ ಮಾನಸಿಕ ಸ್ಥೈರ್ಯ ಕಳೆದಿದ್ದಾರೆ. ಅವರೀಗ ದುರ್ಬಲ ಮುಖ್ಯಮಂತ್ರಿಯಾಗಿದ್ದಾರೆ.