ಮುಂಬೈ : ಸಂಗೀತ ತಂಡವೊಂದರ ಸದಸ್ಯರನ್ನು ಕರೆದೊಯ್ಯುತ್ತಿದ್ದ ಬಸ್ ಪ್ರಪಾತಕ್ಕೆ ಉರುಳಿದ ಪರಿಣಾಮ 12 ಜನರು ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ಪುಣೆಯಿಂದ ಮುಂಬೈಗೆ ಹೋಗುತ್ತಿದ್ದಾಗ ಹೆದ್ದಾರಿಯ ಶಿಂಗ್ರೋಬಾ ದೇವಸ್ಥಾನದ ಬಳಿ ಮುಂಜಾನೆ 4.50ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 27 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಜಿ ಪ್ರಭು ವಾಡಕ್ ಗ್ರೂಪ್ನ ಸದಸ್ಯರು ಪುಣೆ ಜಿಲ್ಲೆಯ ಪಿಂಪ್ರಿ