ಲಾಭದಾಯಕ ಹುದ್ದೆಹೊಂದಿದ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಕೋವಿಂದ್ 20 ಆಮ್ ಆದ್ಮಿ ಪಕ್ಷದ ಶಾಸಕರನ್ನು ಅನರ್ಹಗೊಳಿಸಿ ಅಂಕಿತ ಹಾಕಿದ್ದಾರೆ. ಆಮ್ ಆದ್ಮಿ ಪಕ್ಷದ 20 ಶಾಸಕರು ಲಾಭದಾಯಕ ಹುದ್ದೆ ಹೊಂದಿದ್ದಾರೆ ಎಂದು ಕೇಂದ್ರ ಚುನಾವಣೆ ಆಯೋಗ ರಾಷ್ಟ್ರಪತಿಯವರಿಗೆ ಶಿಫಾರಸ್ಸು ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿತ್ತು. ಇದೀಗ ಕೋವಿಂದ್ ಅಂಕಿತ ಹಾಕುವುದರೊಂದಿಗೆ 20 ಶಾಸಕರನ್ನು ಶಾಸಕತ್ವ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ಕೇಂದ್ರ ಚುನಾವಣೆ ಆಯೋಗದ ಕ್ರಮವನ್ನು ಪ್ರಶ್ನಿಸಿ