ನವದೆಹಲಿ: ಮುಂಬರುವ 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಯನ್ನು ಸೋಲಿಸಲಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.