ನವದೆಹಲಿ : ರಾಜ್ಯದ ಮುಖ್ಯಮಂತ್ರಿಯಾಗಿ ನನ್ನ ಅವಧಿ ಪೂರೈಸಲಿದದ್ದೇನೆ, ಹಾಗೂ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ 2023ರ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲೇ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಡೆದ ಇಂಡಿಯಾ ಕಾನ್ ಕ್ಲೇವ್ ನಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಉತ್ತಮ ಆಡಳಿತ ನೀಡುವ ಜತೆಗೆ ಮತ್ತೊಂದು ಅವಧಿಗೆ ಬಿಜೆಪಿಯನ್ನು ಅಧಿಕಾರಕ್ಕ ತರುತ್ತೇನೆ .ಎಷ್ಟು ಅವಧಿಗೆ ನಾನು ಮುಖ್ಯಮಂತ್ರಿಯಾಗಿರುತ್ತೇನೆ ಎಂಬುದು ಮುಖ್ಯವಲ್ಲ.