ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಡಿ ವಿಚಾರಣೆಯಿಂದ ಮೂರು ದಿನ ರಿಲೀಫ್ ನೀಡಿದೆ.ಗುರುವಾರ ಈ ಸಂಬಂಧ ಇಡಿ ಅಧಿಕಾರಿಗಳಿಗೆ ಪತ್ರ ಬರೆದಿರುವ ರಾಹುಲ್ ಗಾಂಧಿ, ತಾಯಿ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ತಗುಲಿದ್ದು ಆಸ್ಪತ್ರೆ ದಾಖಲಾಗಿದ್ದಾರೆ ಮತ್ತು ಇದೇ ಭಾನುವಾರ ತಮ್ಮ ಹುಟ್ಟುಹಬ್ಬ ಇರುವ ಹಿನ್ನೆಲೆ ಭಾನುವಾರದವರೆಗೂ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದರು. ಸೋಮವಾರದಿಂದ ಬುಧವಾರದವರೆಗೂ ವಿಚಾರಣೆಗೆ