ಅಮರಾವತಿ : ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ನಡೆಸುತ್ತಿರುವ ರ್ಯಾಲಿ ವೇಳೆ ನೂಕುನುಗ್ಗಲಿನಿಂದ ಕಾಲ್ತುಳಿತಕ್ಕೆ ಇತ್ತೀಚೆಗಷ್ಟೇ 8 ಮಂದಿ ದಾರುಣ ಸಾವಿಗೀಡಾದ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ.ನಾಯ್ಡು ಅವರ ರ್ಯಾಲಿ ವೇಳೆ ಗುಂಟೂರು ಜಿಲ್ಲೆಯಲ್ಲಿ ಕಾಲ್ತುಳಿತಕ್ಕೆ ಮತ್ತೆ 3 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ 2024ರ ವಿಧಾನಸಭಾ ಚುನಾವಣೆಯ ತಯಾರಿಗಾಗಿ ರಾಜ್ಯಾದ್ಯಂತ ನಾಯ್ಡು ಅವರು ಸರಣಿ ರಾಜಕೀಯ ಸಭೆಗಳನ್ನು ನಡೆಸುತ್ತಿದ್ದಾರೆ.ರ್ಯಾಲಿ ವೇಳೆ ಸಾವಿರಾರು ಸಂಖ್ಯೆಯಲ್ಲಿ ಜನರು