ಕೊರೊನಾ ನಾಲ್ಕನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿದಿನ ಪರೀಕ್ಷೆ ಪ್ರಮಾಣವನ್ನು 30 ಸಾವಿರಕ್ಕೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜೊತೆ ವೀಡಿಯೊ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಪ್ರಮಾಣ ಇತರೆ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆ ಇದೆ. ಆದರೆ ಏಪ್ರಿಲ್ 9ರಿಂದ ಹೆಚ್ಚಳ ಕಂಡು ಬಂದಿದೆ ಎಂದರು. ಸಭೆಯಲ್ಲಿ ಪ್ರಧಾನಿ ಮೋದಿ ಹಲವಾರು ಸಲಹೆ