ಶ್ರೀನಗರ: ಇಲ್ಲಿಯ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಶಿಬಿರದ ಬಳಿಯ ಕಟ್ಟಡದಲ್ಲಿ ಅಡಗಿದ್ದ ಇಬ್ಬರು ಲಷ್ಕರ್ ಎ ತಯ್ಯಿಬಾ (ಎಲ್ಇಟಿ) ಉಗ್ರರನ್ನು ಭದ್ರತಾ ಸಿಬ್ಬಂದಿ ಗುಂಡಿಕ್ಕಿ ಕೊಲ್ಲುವುದರೊಂದಿಗೆ 30 ತಾಸುಗಳ ಕಾರ್ಯಾಚರಣೆ ಅಂತ್ಯಗೊಂಡಿದೆ. ವಿಶೇಷ ಪಡೆ ಕಾರ್ಯಾಚರಣೆ: ಮಂಗಳವಾರ ರಂಗಕ್ಕಿಳಿದ ಜಮ್ಮು-ಕಾಶ್ಮೀರ ಪೊಲೀಸ್ ಇಲಾಖೆಯ ವಿಶೇಷ ಕಾರ್ಯಾಚರಣೆ ಪಡೆ (ಎಸ್ಒಜಿ) ಮತ್ತು ಸಿಆರ್ಪಿಎಫ್ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರೂ ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದೆ. ಒಬ್ಬ ಉಗ್ರನನ್ನು ಆತ ಅಡಗಿದ್ದ