ಶ್ರೀನಗರ:ಜಮ್ಮು-ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಸಿಆರ್ ಪಿಎಫ್ ಕ್ಯಾಂಪ್ ಮೇಲೆ ಆತ್ಮಾಹುತಿ ದಾಳಿಗೆ ಯತ್ನಿಸಿದ್ದ ನಾಲ್ವರು ಉಗ್ರರನ್ನು ಭಾರತೀಯ ಸೇನಾ ಪಡೆ ಹೊಡೆದುರುಳಿಸಿದೆ. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಉತ್ತರ ಕಾಶ್ಮೀರದ ಸಂಬಾಲ್ ನ ಸಿಆರ್ ಪಿಎಫ್ ನ 45ನೇ ಬೆಟಾಲಿಯನ್ ಕ್ಯಾಂಪ್ ಮೇಲೆ ದಾಳಿಗೆ ಯತ್ನಿಸಿದಾಗ ಯೋಧರು ಮತ್ತು ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ನಾಲ್ವರು ಭಯೋತ್ಪಾದಕರು ಸೇನೆಯ ಗುಡೇಟಿಗೆ ಬಲಿಯಾಗಿದ್ದಾರೆ.