ನಾಲ್ಕು ವರ್ಷದ ಬಾಲಕಿಯೊಬ್ಬಳು ಅಪಾರ್ಟ್ಮೆಂಟ್ನ 10 ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಉತ್ತರಪ್ರದೇಶ ರಾಜ್ಯದ ಘಾಜಿಯಾಬಾದ್ನಲ್ಲಿರುವ ಇಂದಿರಾಪುರಂ ರೆಸಿಡೆನ್ಸಿಯಲ್ ಸೊಸೈಟಿ ವಲಯದಲ್ಲಿ ನಡೆದಿದೆ. ಮೃತಪಟ್ಟಿರುವ ಬಾಲಕಿಯ ಹೆಸರು ಮೈರಾ ಸಚಿದೇವ್ ಆಗಿದ್ದು, ಮನೆಯ ಬಾಲ್ಕನಿಯಲ್ಲಿ ಆಟವಾಡುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಘಟನೆ ಸಂಭವಿಸಿದ ತತ್ಕ್ಷಣ ಸ್ಥಳೀಯರು ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಆಸ್ಪತ್ರೆ ತಲುಪುವಷ್ಟರಲ್ಲೇ ಮಗು ಮೃತಪಟ್ಟಿರುವುದಾಗಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಮನಿಷ್