ಮೂವರು ಮಹಿಳೆಯರೊಂದಿಗೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ವ್ಯಕ್ತಿಯೊಬ್ಬ ಬುಡಕಟ್ಟು ಪದ್ಧತಿಯ ಪ್ರಕಾರ ಏಕಕಾಲದಲ್ಲಿ ಮದುವೆಯಾಗಿ ಸುದ್ದಿಯಾಗಿದ್ದಾನೆ. ಮಧ್ಯಪ್ರದೇಶದ ಭೋಪಾಲ್ನಿಂದ ಸುಮಾರು 400ಕಿ.ಮೀ ದೂರದಲ್ಲಿರುವ ನಾನ್ಪುರ್ ಗ್ರಾಮದ ಮಾಜಿ ಸರ್ಪಂಚ್ ಮೌರ್ಯ (42) ಅವರು ನಾನಾಬಾಯಿ, ಮೇಳ ಮತ್ತು ಸಕ್ರಿ ಅವರನ್ನು ಒಂದೇ ಮಂಟಪದಲ್ಲಿ ಮದುವೆಯಾಗಿದ್ದಾರೆ. ಮೌರ್ಯ 2003ರಲ್ಲಿ ನಾನಾಬಾಯಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ನಂತರ ಒಂದೇ ಮನೆಯಲ್ಲೇ ವಾಸಿಸುತ್ತಿದ್ದರು. ಅವರೊಂದಿಗೆ ಮತ್ತಿಬ್ಬರು ಮಹಿಳೆಯರಾದ ಮೇಳ ಮತ್ತು ಸಕ್ರಿ ಕಳೆದ 15 ವರ್ಷಗಳಿಂದ