5 ಸಾವಿರ ಕೋಟಿ ಹವಾಲಾ ಹಣ ವಶಕ್ಕೆ ಚುನಾವಣೆ ಆಯೋಗ ಸಿದ್ದತೆ

ಚೆನ್ನೈ, ಭಾನುವಾರ, 30 ಮಾರ್ಚ್ 2014 (16:40 IST)

PTI
5000 ಕೋಟಿ ರೂಪಾಯಿಗಳನ್ನು ಬಂದರುಗಳ ಮೂಲಕ ಹಡಗುಗಳಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದೆ ಎನ್ನುವ ಮಾಹಿತಿ ಪಡೆದ ಚುನಾವಣಾ ಆಯೋಗ ಶೋಧ ಕಾರ್ಯವನ್ನು ಶೀಘ್ರಗೊಳಿಸಿ ಅನೇಕ ತಂಡಗಳನ್ನು ರಚಿಸಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಿಂದ ಕೇರಳ ಸೇರಿದಂತೆ ವಿವಿಧ ರಾಜ್ಯಗಳಿಗೆ 5 ಸಾವಿರ ಕೋಟಿ ರೂಪಾಯಿ ಹವಾಲಾ ಹಣ, ಚಿನ್ನ ಮತ್ತು ಡ್ರಗ್ಸ್ ಹಡುಗುಗಳು ಮತ್ತು ಆಯಿಲ್ ಟ್ಯಾಂಕರ್‌ಗಳ ಮೂಲಕ ಸಾಗಿಸಲಾಗುತ್ತಿದೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಪ್ರವೀಣ್ ಕುಮಾರ್ ಆದೇಶದ ಮೇರೆಗ ತುತೂಕುಡಿ ಬಂದರಿನಲ್ಲಿ ಭಾರಿ ತಪಾಸಣೆ ಆರಂಭಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಲೇಷಿಯಾ, ಹಾಂಗ್‌ಕಾಂಗ್ ಮತ್ತು ಇತರ ದೇಶಗಳಿಂದ ಭಾರಿ ಪ್ರಮಾಣದಲ್ಲಿ ದುಷ್ಕರ್ಮಿಗಳು ಹಣ ಸಾಗಿಸುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಲಭಿಸಿದ್ದರಿಂದ ಶೋಧ ಕಾರ್ಯ ಮುಂದುವರಿದಿದೆ ಎಂದು ತನಿಖಾ ಮೂಲಗಳು ತಿಳಿಸಿವೆ.

ಚುನಾವಣೆಯಲ್ಲಿ ಶತಾಯ ಗತಾಯ ಅಕ್ರಮ ಹಣ ಬಳಕೆಗೆ ಕಡಿವಾಣ ಹಾಕಬೇಕು ಎನ್ನುವ ಉದ್ದೇಶದಿಂದ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಈ ಬೆತ್ತಲೆ ಮಹಿಳೆ ಮಾಡಿದಳು ಗದ್ದಲ

ಸೇಂಟ್‌‌‌‌‌ ಪೀಟರ್ಸ್‌‌‌ಬರ್ಗ್‌‌‌‌ : ಒಬ್ಬ ಮಹಿಳೆ ಬೆತ್ತಲಾಗಿ ಮ್ಯಾಕ್‌‌‌ಡೊನಾಲ್ಡ್‌ ಒಳಗಡೆ ಬಂದು ಗದ್ದಲ ...

ಬಿಸಿಲಿನ ಬೇಗೆಯಿಂದ ಬಸವಳಿದ ಜನರಿಗೆ ತಂಪೆರೆದ ಮಳೆರಾಯ

ಬೆಂಗಳೂರು: ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಬೆಂಗಳೂರಿನಲ್ಲಿ ಮಳೆರಾಯ ತಂಪೆರೆದಿದ್ದಾನೆ. ಬೆಂಗಳೂರು ...

ಮೋದಿ ಪ್ರಧಾನಿಯಾಗೋಲ್ಲ, ಯುಪಿಎ ಅಧಿಕಾರಕ್ಕೆ ಬರ್ತದೆ: ಇಬ್ರಾಹಿಂ ಭವಿಷ್ಯ

ಮಂಗಳೂರು: ನರೇಂದ್ರ ಮೋದಿ ಪ್ರಧಾನಮಂತ್ರಿ ಆಗೋದಿಲ್ಲ. ಯುಪಿಎ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತದೆ. ಈ ಬಾರಿ ...

ಹಾಸನದಲ್ಲಿ ಮತ್ತೆ ದೇವೇಗೌಡರ ಕೊರಳಿಗೆ ವಿಜಯಮಾಲೆ ಬೀಳುತ್ತಾ?

ಮಾಜಿ ಪ್ರಧಾನಿಯ ಕ್ಷೇತ್ರ ಹಾಸನ ಕೂಡ ಸಮಸ್ಯೆಗಳಿಂದ ಹೊರತಾಗಿಲ್ಲ. ಮಾಜಿ ಪ್ರಧಾನಿಯ ತವರು ಎನ್ನುವ ಖ್ಯಾತಿ ...