ನವದೆಹಲಿ : ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಕಂಪನಿಗಳಿಂದ ಗುತ್ತಿಗೆದಾರರ ಮೂಲಕ ನೇಮಕಗೊಂಡ ಹೊರಗುತ್ತಿಗೆ ಕಾರ್ಮಿಕರ ಸಂಖ್ಯೆ ಕಳೆದ ವರ್ಷಕ್ಕಿಂತ ಶೇ.7.7 ರಷ್ಟು ಕಡಿತಗೊಂಡಿದ್ದು, ಒಂದೇ ವರ್ಷದಲ್ಲಿ ಸುಮಾರು 60,000 ಮಂದಿ ಕೆಲಸ ಕಳೆದುಕೊಂಡಿದ್ದಾರೆ ಎಂದು ನೇಮಕಾತಿ ಸಂಸ್ಥೆ ಮಂಗಳವಾರ ತಿಳಿಸಿದೆ. ವಿಶ್ವದಾದ್ಯಂತ ಅನೇಕ ಕಂಪನಿಗಳು ವೆಚ್ಚ ಕಡಿತ ಹಾಗೂ ಇತರ ಕಾರಣಗಳನ್ನು ನೀಡಿ ತನ್ನ ಉದ್ಯೋಗಿಗಳನ್ನು ಸಾಮೂಹಿಕವಾಗಿ ವಜಾಗೊಳಿಸುತ್ತಿರುವುದು ಇತ್ತೀಚೆಗೆ ಹೆಚ್ಚಾಗಿದೆ. ಈ ನಡುವೆ ಭಾರತದಲ್ಲಿ ಐಟಿ ಕ್ಷೇತ್ರದ