ಬೆಂಗಳೂರು (ಆ.17): ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಕೊರೋನಾ ಮೂರನೇ ಅಲೆ ಎದುರಾಗುವ ಸಾಧ್ಯತೆ ದಟ್ಟವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಜಿಲ್ಲಾ ಮಟ್ಟದಲ್ಲೇ ಕೊರೋನಾ ನಿಯಂತ್ರಣಕ್ಕಾಗಿ ‘ಜಿಲ್ಲಾ ತಾಂತ್ರಿಕ ತಜ್ಞರ ಸಮಿತಿ’ (ಟಿಇಸಿ) ರಚನೆ ಮಾಡಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಜತೆಗೆ, ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ದಕ್ಷಿಣ ಕನ್ನಡ, ಉಡುಪಿ, ಹಾಸನ, ಮೈಸೂರು, ಕೊಡಗು, ಚಿಕ್ಕಮಗಳೂರು ಹಾಗೂ ಚಾಮರಾಜನಗರದಲ್ಲಿ ಸೋಂಕಿತರ ಸಂಪರ್ಕಿತರ ಪತ್ತೆಗೆ ವಿಶೇಷ ಕ್ರಮ ಕೈಗೊಳ್ಳುವಂತೆ ಆದೇಶಿಸಲಾಗಿದೆ. ಈ ಜಿಲ್ಲೆಗಳಲ್ಲಿ