ಟ್ರಕ್ ಮತ್ತು ಟೆಂಪೊ ನಡುವೆ ಸಂಭವಿಸಿದ ಭೀಕರ ಮುಖಾಮುಖಿ ಡಿಕ್ಕಿಯಲ್ಲಿ ಬೀದರ್ ನ ಒಂದೇ ಕುಟುಂಬದ 6 ಮಂದಿ ಸೇರಿ 7 ಮಂದಿ ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ. ಉತ್ತರ ಪ್ರದೇಶದ ಮೋತಿಪುರದಲ್ಲಿ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸೇರಿದಂತೆ 7 ಮಂದಿ ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿದ್ದಾರೆ. ಬಾರಚಿ- ಲಖಿಮ್ ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, ಸ್ಥಳದಲ್ಲೇ