ಹೈದರಾಬಾದ್ : ಆಂಧ್ರಪ್ರದೇಶದ ಪರೀಕ್ಷಾ ಮಂಡಳಿ ಬುಧವಾರ 11 ಮತ್ತು 12 ನೇ ತರಗತಿಯ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ ನಂತರ ಒಂಭತ್ತು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶ್ರೀಕಾಕುಳಂ ಜಿಲ್ಲೆಯ ಗೋಪಾಲಪುರಂ ಗ್ರಾಮದ 17 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿ ಹೆಚ್ಚಿನ ಪರೀಕ್ಷೆಗಳಲ್ಲಿ ಅನುತ್ತೀರ್ಣಗೊಂಡಿದ್ದ. ಇದರಿಂದ ಮನನೊಂದು ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮಲ್ಕಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಿನಾಧಪುರಂನ 16 ವರ್ಷದ ಬಾಲಕಿ